Kannada, Kannadiga, Kannadigaru, Karnataka,

Kannadigarella ondaagi Kannadavannu ulisona, kalisona and belesona

ಮನೆಮನೆಗಳಲಿ

ಹಚ್ಚೇವು ಕನ್ನಡದ ದೀಪ ಕರುನಾಡ ದೀಪ ಸಿರಿನುಡಿಯ ದೀಪ ಒಲವೆತ್ತಿ ತೋರುವ ದೀಪಬಹುದಿನಗಳಿಂದ ಮೈಮರೆವೆಯಿಂದ ಕೂಡಿರುವ ಕೊಳೆಯ ಕೊಚ್ಚೇವು ಯೆಲ್ಲೆಲ್ಲಿ ಕನ್ನಡದ ಕಂಪು ಸೂಸಲು ಅಲ್ಲಲ್ಲಿ ಕರಣ ಚಾಚೇವು ನಡುನಾಡೆ ಇರಲಿ ಗಡಿನಾಡೆ ಇರಲಿ ಕನ್ನಡದ ಕಳೆಯ ಕೆಚ್ಚೇವು ಮರೇತೇವು ಮರವ ತರದೇವು ಮನವ ಎರದೇವು ಒಲವ ಹಿರಿನೆನಪಾ ನರನರವನೆಲ್ಲ ಹುರಿಗೊಳಿಸಿ ಹೊಸದು ಹಚ್ಚೇವು ಕನ್ನಡದ ದೀಪ ಕಲ್ಪನೆಯ ಕಣ್ಣು ಹರಿವನಕ ಸಾಲು ದೀಪಗಳ ಬೆಳಕ ಬೀರೇವು ಹಚ್ಚಿರುವ ದೀಪದಲಿ ತಾಯರೂಪ ಅಚ್ಚಳಿಯದಂತೆ ತೋರೇವು ಒಡಲೊಳಲ ಕೆಚ್ಚಿನ ಕಿಡಿಗಳನ್ನು ಗಡಿನಾಡಿನಾಚೆ ತೊರೇವು ಹಮ್ಮಿರಲು ಪ್ರೀತಿ ಎಲ್ಲಿಹುದು ಭೀತಿ ನಾಡೊಲವ ನೀತಿ ಹಿಡಿನೆನಪಾ ಮನೆಮನೆಗಳಲ್ಲಿ ಮನಮನಗಳಲ್ಲಿ ಹಚ್ಚೇವು ಕನ್ನಡದ ದೀಪ ನಮ್ಮವರು ಗಳಿಸಿದ ಹೆಸರುಳಿಸಲು ಎಲ್ಲಾರು ಒಂದುಗೂಡೇವು ನಮ್ಮೆದೆಯ ಮಿಡಿಯುವೀ ಮಾತಿನಲ್ಲಿ ಮಾತೆಯನು ಪೂಜೆಮಾಡೇವು ನಮ್ಮುಸಿರು ತೀಡುವೀ ನಾಡಿನಲ್ಲಿ ಮಾಂಗಲ್ಯಗೀತೆ ಹಾಡೇವು ತೊರೆದೇವು ಮರುಳ ಕಡದೇವು ಇರುಳ ಪಡದೇವು ತಿರುಳ ಹಿರಿನೆನಪಾ ಕರುಳೆಂಬ ಕುಡಿಗೆ ಮಿಂಚನ್ನೆ ಮುಡಿಸಿ ಹಚ್ಚೇವು ಕನ್ನಡದ ದೀಪ ಕನ್ನಡವೇ ಸತ್ಯ….. ಕನ್ನಡವೇ ನಿತ್ಯ ……..ಜೈ ಕರ್ನಾಟಕ ಮಾತೆ………ಕನ್ನಡ ರಾಜ್ಯೋತ್ಸವದ ಶುಭಾಶಯಗಳು……….ಮನ-ಮನಗಳಲ್ಲಿ ಕನ್ನಡದ ದೀಪ ಬೆಳಗಿಸಿ,ವಿಶ್ವದೆಲ್ಲೆಡೆ ಕನ್ನಡದ ಕಂಪನ್ನು ಪಸರಿಸೋಣ………………………

November 1, 2007 - Posted by | EKAVI Group

1 Comment »

  1. Its very bad

    Comment by varsha | January 28, 2014 | Reply


Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s

%d bloggers like this: